ADVERTISEMENT

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಬಗ್ಗೆ ಚರ್ಚೆ; ಗೆಹಲೋತ್‌ ಭೇಟಿಯಾದ ಶಶಿ ತರೂರ್‌

ಪಿಟಿಐ
Published 4 ಸೆಪ್ಟೆಂಬರ್ 2022, 14:32 IST
Last Updated 4 ಸೆಪ್ಟೆಂಬರ್ 2022, 14:32 IST
ಶಶಿ ತರೂರ್‌
ಶಶಿ ತರೂರ್‌   

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್‌ ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರನ್ನು ಭಾನುವಾರ ಭೇಟಿಯಾಗಿ ಪಕ್ಷದಅಧ್ಯಕ್ಷೀಯ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂಬರುವ ಚುನಾವಣೆಗಳು ಮತ್ತು ಪಕ್ಷದ ಭವಿಷ್ಯದ ವಿಚಾರವಾಗಿ ಉಭಯ ನಾಯಕರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದೂ ಹೇಳಿವೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಈ ಇಬ್ಬರು ನಾಯಕರೂ ನಿರೀಕ್ಷಿತ ಆಕಾಂಕ್ಷಿಗಳಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.