ಕಾಂಗ್ರೆಸ್ ನಾಯಕ ಶಶಿ ತರೂರ್
ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ‘ಎಕ್ಸ್‘ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು 10ನೇ ತರಗತಿ ಕಲಿತ ವಿದ್ಯಾರ್ಥಿಗಳ ಫಲಿತಾಂಶ ಇತ್ತೀಚೆಗೆ ಬಂದಿದೆ. 12ನೇ ತರಗತಿಯಲ್ಲಿ ಓದಿದ ವಿದ್ಯಾರ್ಥಿಗಳ ಫಲಿತಾಂಶ ನಾಳೆ ಬರುವ ನಿರೀಕ್ಷೆ ಇದೆ. ಏನೂ ಓದದೆ ಇರುವವರ ಫಲಿತಾಂಶ ಜೂನ್ 4ರಂದು ಹೊರಬೀಳಲಿದೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ದೇಶದಾದ್ಯಂತ ವಿವಿಧ ಹಂತಗಳಲ್ಲಿ ಲೋಕಸಭೆ ಚುನಾವಣೆ ಹಾಗೂ ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಜೂನ್ 4ರಂದು ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.