ADVERTISEMENT

ನಗ್ನವಾಗಿ ಮನೆಗಳ ಬಾಗಿಲು ಬಡಿಯುತ್ತಿದ್ದ ಮಹಿಳೆ: ಮಾನಸಿಕ ಅಸ್ವಸ್ಥೆ ಎಂದ ಪೊಲೀಸರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಫೆಬ್ರುವರಿ 2023, 9:28 IST
Last Updated 4 ಫೆಬ್ರುವರಿ 2023, 9:28 IST
   

ಲಖನೌ: ಉತ್ತರ ಪ್ರದೇಶದ ರಾಂಪುರ ಎಂಬಲ್ಲಿ ಬೆತ್ತಲಾಗಿ ಮನೆಗಳ ಬಾಗಿಲು ಬಡಿಯುತ್ತಿದ್ದ ಮಹಿಳೆಯನ್ನು ಪತ್ತೆ ಮಾಡಿರುವ ಪೊಲೀಸರು ಆಕೆ ಮಾನಸಿಕ ಅಸ್ವಸ್ಥೆ ಎಂದು ತಿಳಿಸಿದ್ದಾರೆ.

ಮಹಿಳೆಯು ಕಳೆದ ಐದು ವರ್ಷಗಳಿಂದ ಬರೇಲಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಆಕೆಯ ಪೋಷಕರು ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭವಿಷ್ಯದಲ್ಲಿ ಹೀಗೆ ಆಗದಂತೆ ನೋಡಿಕೊಳ್ಳಬೇಕು ಎಂದು ಮಹಿಳೆಯ ಕುಟುಂಬ ಸದಸ್ಯರಿಗೆ ಸೂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತು, ಘಟನೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿ ಹರಡದಂತೆ ಸಾರ್ವಜನಿಕರನ್ನು ವಿನಂತಿಸಿದ್ದಾರೆ.

ADVERTISEMENT

ಮಹಿಳೆ ನಗ್ನವಾಗಿ ಮನೆಗಳ ಬಾಗಿಲು ಬಡಿಯುತ್ತಿರುವುದರ ಬಗ್ಗೆ ಸ್ಥಳೀಯ ರಾಂಪುರದ ನಿವಾಸಿಯೊಬ್ಬರು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು. ರಾಂಪುರದ ಮಿಲಾಕ್ ಗ್ರಾಮದ ಬೀದಿಗಳಲ್ಲಿ ಮಹಿಳೆ ಬೆತ್ತಲಾಗಿ ತಿರುಗಾಡುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲೂ ದಾಖಲಾಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೊಗಳಿಗೆ ಫೆ. 2ರಂದು ಪ್ರತಿಕ್ರಿಯಿಸಿದ್ದ ರಾಂಪುರ ಪೊಲೀಸರ ಅಧಿಕೃತ ಟ್ವಿಟರ್ ಹ್ಯಾಂಡಲ್, ಈ ಬಗ್ಗೆ ತನಿಖೆ ನಡೆಸಲು ತಂಡವನ್ನು ರಚಿಸಲಾಗಿದೆ ಎಂದೂ ತಿಳಿಸಿತ್ತು.

ಮಹಿಳೆ ಏನಾದರೂ ಪತ್ತೆಯಾದರೆ ಆಕೆಗೆ ಬಟ್ಟೆ ತೊಡಿಸಿ, ನಂತರ ಸ್ಥಳೀಯ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್‌ ಅಧಿಕಾರಿಗಳು ಸಾಮಾಜಿಕ ಮಾಧ್ಯಮದಲ್ಲಿ ಮನವಿ ಮಾಡಿದ್ದರು.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.