ಶಿಬು ಸೊರೇನ್ ಮತ್ತು ರಾಮದಾಸ ಸೊರೇನ್
ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೇಹಸ್ಥಿತಿ ಗಂಭೀರವಾಗಿದೆ. ಅವರನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.
ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿರುವ ಸೊರೇನ್ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದರ ನಡುವೆ ಜಾರ್ಖಂಡ್‌ನ ಶಿಕ್ಷಣ ಸಚಿವ ರಾಮದಾಸ ಸೊರೇನ್ ಅವರಿಗೆ ಶನಿವಾರ ಮಿದುಳು ಆಘಾತವಾಗಿದ್ದು, ಅವರನ್ನು ಹೆಲಿಕಾಪ್ಟರ್ ಮೂಲಕ ದೆಹಲಿಗೆ ಸಾಗಿಸಲಾಗಿದೆ. ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
ಜಾರ್ಖಂಡ್ ಮುಕ್ತಿ ಮೋರ್ಚಾದ ಮುಖಂಡರಾದ ಶಿಬು ಸೊರೇನ್ ಅವರು ಕಳೆದ 38 ವರ್ಷಗಳಿಂದ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ. ಅವರ ಪುತ್ರ, ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ತಂದೆಯ ಆರೋಗ್ಯ ಕುರಿತು ಮಾಹಿತಿ ನೀಡಿದ್ದಾರೆ.
ಮಿದುಳು ಆಘಾತಕ್ಕೆ ಒಳಗಾದ ಜಾರ್ಖಂಡ್‌ನ ಶಿಕ್ಷಣ ಸಚಿವ ರಾಮದಾಸ ಸೊರೇನ್ ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.