ADVERTISEMENT

Video | ಶಿಮ್ಲಾ: ಭಾರಿ ಮಳೆ, ಐದು ಅಂತಸ್ತಿನ ಕಟ್ಟಡ ಕುಸಿತ

ಪಿಟಿಐ
Published 30 ಜೂನ್ 2025, 10:21 IST
Last Updated 30 ಜೂನ್ 2025, 10:21 IST
<div class="paragraphs"><p>ಶಿಮ್ಲಾ: ಐದು ಅಂತಸ್ತಿನ ಕಟ್ಟಡ ಕುಸಿತ</p></div>

ಶಿಮ್ಲಾ: ಐದು ಅಂತಸ್ತಿನ ಕಟ್ಟಡ ಕುಸಿತ

   

(ಪಿಟಿಐ ಚಿತ್ರ)

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮುಂಗಾರು ಮಳೆ ಸಕ್ರಿಯವಾಗಿದ್ದು, ಹಲವಾರು ಪ್ರದೇಶಗಳಲ್ಲಿ ಭೂಕುಸಿತ ಸೇರಿದಂತೆ ಭಾರಿ ಹಾನಿ ಉಂಟಾಗಿದೆ.

ADVERTISEMENT

ಶಿಮ್ಲಾದ ಉಪನಗರ ಭಟ್ಟಾಕುಫರ್‌ನಲ್ಲಿ ಮೇಘಸ್ಫೋಟದಿಂದಾಗಿ ಭಾರಿ ಮಳೆಯಾಗಿದ್ದು, ಐದು ಅಂತಸ್ತಿನ ಕಟ್ಟಡ ಕುಸಿದಿದೆ.

ಪ್ರಸ್ತುತ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿವೆ. ಆದರೆ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಅಪಾಯದ ಸೂಚನೆಯ ಹಿನ್ನೆಲೆಯಲ್ಲಿ ಅಲ್ಲಿಂದ ಜನರನ್ನು ಸ್ಥಳಾಂತರಿಸಲಾಗಿತ್ತು.

ರಾಂಪುರದಲ್ಲಿ ಮೇಘಸ್ಫೋಟದಿಂದಾಗಿ ಹಲವಾರು ಹಸುಗಳು ಕೊಚ್ಚಿ ಹೋಗಿವೆ. ಹಲವಾರು ಕಡೆಗಳಲ್ಲಿ ಭೂಕುಸಿತದಿಂದಾಗಿ ರಸ್ತೆ ಸಂಚಾರಕ್ಕೆ ತೊಡಕಾಗಿದೆ.

ನಿರಂತರ ಮಳೆ ಹಿನ್ನೆಲೆಯಲ್ಲಿ ಹಿಮಾಚಲದ 12 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಶಿಮ್ಲಾ: ಐದು ಅಂತಸ್ತಿನ ಕಟ್ಟಡ ಕುಸಿತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.