ಮುಂಬೈ: ಫ್ರಾನ್ಸ್‌ನಲ್ಲಿ ಧರ್ಮದ ಹೆಸರಿನಲ್ಲಿ ಜನರ ಗಂಟಲು ಕತ್ತರಿಸಿದವರು ಮಾನವೀಯತೆಯ ಶತ್ರುಗಳು. ಈ ಕುರಿತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಅವರನ್ನು ಬೆಂಬಲಿಸುವ ಅಗತ್ಯವಿದೆ ಎಂದು ಶಿವಸೇನೆ ಹೇಳಿದೆ.
ಭಾರತದ ರಾಜಕೀಯ ಪಕ್ಷಗಳು ಮತ್ತು ಮುಸ್ಲಿಮರು ಫ್ರಾನ್ಸ್‌ನ ಆತಂರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಸಕಾರಣವಿಲ್ಲ ಎಂದು ಶಿವಸೇನೆ ತನ್ನ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಿದೆ.
ವ್ಯಂಗ್ಯಚಿತ್ರವೊದರ ಸಂಬಂಧ ಫ್ರಾನ್ಸ್‌ನಲ್ಲಿ ಮೂಡಿರುವ ವಿವಾದದ ಹಿನ್ನೆಲೆಯಲ್ಲಿ ಶಿವಸೇನೆ ಈ ಪ್ರತಿಕ್ರಿಯೆ ದಾಖಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.