ADVERTISEMENT

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಶಿವಸೇನಾ ನಿರ್ಧಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜನವರಿ 2021, 14:18 IST
Last Updated 17 ಜನವರಿ 2021, 14:18 IST
ಶಿವಸೇನಾ ಮುಖ್ಯಸ್ಥ ಉದ್ದವ್‌ ಠಾಕ್ರೆ
ಶಿವಸೇನಾ ಮುಖ್ಯಸ್ಥ ಉದ್ದವ್‌ ಠಾಕ್ರೆ   

ಮುಂಬೈ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಶಿವಸೇನಾ ನಿರ್ಧರಿಸಿದೆ ಎಂದು ಪಕ್ಷದ ಹಿರಿಯ ನಾಯಕ ಸಂಜಯ್‌ ರಾವುತ್‌ ತಿಳಿಸಿದ್ದಾರೆ.

ಈ ವಿಚಾರವಾಗಿ ಭಾನುವಾರ ಸಂಜೆ ಟ್ವೀಟ್‌ ಮಾಡಿರುವ ಅವರು, 'ಪಕ್ಷದ ಮುಖ್ಯಸ್ಥ ಉದ್ದವ್‌ ಠಾಕ್ರೆ ಅವರ ಜೊತೆ ಚರ್ಚಿಸಿದ ನಂತರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಶಿವಸೇನಾ ನಿರ್ಧರಿಸಿದೆ. ನಾವು ಶೀಘ್ರದಲ್ಲೇ ಕೋಲ್ಕತ್ತವನ್ನು ತಲುಪಲಿದ್ದೇವೆ' ಎಂದು ಮಾಹಿತಿ ನೀಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯು 2021ರ ಮಾರ್ಚ್‌ ಮತ್ತು ಏಪ್ರಿಲ್‌ನಲ್ಲಿ ನಿಗದಿಯಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾದೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್‌ ಪಕ್ಷವು ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.