ADVERTISEMENT

ಎಕೆ-47ನಿಂದ ಗುಂಡಿಕ್ಕಿ ಹತ್ಯೆ ಮಾಡುವುದಾಗಿ ರಾವುತ್‌ಗೆ ಬೆದರಿಕೆ: ವ್ಯಕ್ತಿ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಏಪ್ರಿಲ್ 2023, 14:19 IST
Last Updated 1 ಏಪ್ರಿಲ್ 2023, 14:19 IST
ಸಂಜಯ್‌ ರಾವುತ್‌
ಸಂಜಯ್‌ ರಾವುತ್‌   

ನವದೆಹಲಿ: ರಾಜ್ಯಸಭಾ ಸಂಸದ ಹಾಗೂ ಶಿವಸೇನಾದ ನಾಯಕ ಸಂಜಯ್‌ ರಾವುತ್‌ ಅವರಿಗೆ ಪಾತಕಿ ಲಾರೆನ್ಸ್‌ ಬಿಷ್ಣೋಯ್‌ ಹೆಸರಿನಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಸಂಜಯ್ ರಾವುತ್‌ ಅವರಿಗೆ ಬೆದರಿಕೆ ಸಂದೇಶ ರವಾನಿಸಿದ್ದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಚಾರಣೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯಲ್ಲಿ ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ನಾಯಕನನ್ನು ಎಕೆ-47 ರೈಫಲ್‌ನಿಂದ ಗುಂಡಿಕ್ಕಿ ಹತ್ಯೆ ಮಾಡಲಾಗುವುದು ಎಂದು ಸಂಜಯ್‌ ರಾವುತ್‌ ಅವರಿಗೆ ಬೆದರಿಕೆ ಹಾಕಲಾಗಿತ್ತು.

ADVERTISEMENT

ಇ-ಮೇಲ್ ಸಂದೇಶವನ್ನು ಗಮನಿಸಿದ ರಾವುತ್‌, ಮುಂಬೈ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದರು.

ಪ್ರಕರಣ ಸಂಬಂಧ ಮುಂಬೈ ಪೊಲೀಸರು ಭಾರತೀಯ ದಂಡ ಸಂಹಿತೆ 120-ಬಿ (ಕ್ರಿಮಿನಲ್ ಪಿತೂರಿ), 506-II (ಕ್ರಿಮಿನಲ್ ಬೆದರಿಕೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

‘ನನಗೆ ಬೆದರಿಕೆ ಸಂದೇಶ ಬಂದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ನಾನು ಹೆದರುವುದಿಲ್ಲ. ನನ್ನ ಮೇಲೆ ಹಲ್ಲೆ ನಡೆಸಲು ಇದೇ ರೀತಿಯ ಪ್ರಯತ್ನಗಳು ನಡೆದಿವೆ. ಆದರೆ, ಪೊಲೀಸರು ಏನು ಮಾಡಿದರು. ರಾಜ್ಯದ ಗೃಹ ಸಚಿವರು ಯಾವ ಕ್ರಮ ಕೈಗೊಂಡರು’ ಎಂದು ರಾವುತ್ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.