ADVERTISEMENT

ಹಣ ಅಕ್ರಮ ವರ್ಗಾವಣೆ: ಇ.ಡಿ ವಿಚಾರಣೆಗೆ ಶಿವಸೇನಾ ಮುಖಂಡ ಸಂಜಯ್‌ ರಾವುತ್‌ ಹಾಜರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜುಲೈ 2022, 10:24 IST
Last Updated 1 ಜುಲೈ 2022, 10:24 IST
ಸಂಜಯ್‌ ರಾವುತ್‌
ಸಂಜಯ್‌ ರಾವುತ್‌   

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ(ಇ.ಡಿ) ವಿಚಾರಣೆಗೆ ಶಿವಸೇನಾ ನಾಯಕ ಸಂಜಯ್‌ ರಾವುತ್‌ ಶುಕ್ರವಾರ ಮಧ್ಯಾಹ್ನ ಹಾಜರಾದರು.

ದಕ್ಷಿಣ ಮುಂಬೈನ ಇ.ಡಿ ಕಚೇರಿ ಎದುರು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಕಾನೂನು ಪಾಲಿಸುವ ನಾಗರಿಕನಾಗಿ ತನಿಖೆಗೆ ಹಾಜರಾಗುವುದು ನನ್ನ ಕರ್ತವ್ಯ. ನಾನು ಇ.ಡಿಯನ್ನು ದೂಷಿಸುವುದಿಲ್ಲ. ಅವರಿಗೆ ಅಗತ್ಯವಿರುವ ಯಾವುದೇ ಮಾಹಿತಿಯನ್ನು ನಾನು ನೀಡುತ್ತೇನೆ’ ಎಂದು ತಿಳಿಸಿದರು.

ಇದೇ ವೇಳೆ, ಇ.ಡಿ ಕಚೇರಿ ಹೊರಗೆ ಜನಸಂದಣಿ ಹೆಚ್ಚಿಸುವುದು ಬೇಡವೆಂದು ತಮ್ಮ ಬೆಂಬಲಿಗರಿಗೆ ರಾವುತ್‌ ಮನವಿ ಮಾಡಿದರು.

ADVERTISEMENT

ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾದ ‘ಪತ್ರಾ ಚಾಲ್‌’ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಮನ್ಸ್ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.