
ಠಾಣೆ: ಬಿಜೆಪಿ ಪದಾಧಿಕಾರಿ ಮತ್ತು ಅವರ ಬೆಂಬಲಿಗರು ಹಲ್ಲೆ ನಡೆಸಿದ್ದರಿಂದ ಶಿವಸೇನಾದ ಪಾಲಿಕೆ ಸದಸ್ಯರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ.
ಪಾಲಿಕೆ ಸದಸ್ಯ ಹೇಮಂತ್ ಛತುರೆ ಅವರು ಬದ್ಲಾಪುರದ ಸೋನಿವಲಿ ಪ್ರದೇಶದಲ್ಲಿನ ಮಾಘ ಗಣಪತಿ ಪೆಂಡಾಲ್‌ಗೆ ಭೇಟಿ ನೀಡಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆದಿರುವುದಾಗಿ ಆರೋಪಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಬಿಜೆಪಿ ಪದಾಧಿಕಾರಿ ತೇಜಸ್ ಅಲಿಯಾಸ್ ಬಂಟಿ ಮಹಸ್ಕರ್ ಮತ್ತು ಆತನ 20ರಿಂದ 25 ಬೆಂಬಲಿಗರು ವಾಗ್ವಾದ ನಡೆಸಿ ಹಲ್ಲೆ ಮಾಡಿದ್ದಾರೆ ಎಂದು ಹೇಮಂತ್ ಆಪ್ತರು ಆರೋಪಿಸಿದ್ದಾರೆ.
ಹೇಮಂತ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆಯ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳು ಸಾಮಾಜಿ ಜಾಲತಾಣದಲ್ಲಿ ಹರಿದಾಡುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.