ADVERTISEMENT

ಶಿವಾಜಿ ಪ್ರತಿಮೆಗೆ ಮಸಿ: ಲೋಕಸಭೆಯಲ್ಲಿ ಶಿವಸೇನೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 16:01 IST
Last Updated 20 ಡಿಸೆಂಬರ್ 2021, 16:01 IST

ನವದೆಹಲಿ: ಬೆಂಗಳೂರಿನಲ್ಲಿ ನಡೆದಿದ್ದ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದ ಪ್ರಕರಣವನ್ನು ಖಂಡಿಸಿ ಸೋಮವಾರ ಲೋಕಸಭೆಯಲ್ಲಿ ಶಿವಸೇನೆ ಮತ್ತು ಮಹಾರಾಷ್ಟ್ರದ ಇತರೆ ಸಂಸದರು ಪ್ರತಿಭಟಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಪಡಿಸಿದರು.

ಕಲಾಪ ಆರಂಭವಾಗುತ್ತಿದ್ದಂತೆಯೇ ಸಭಾಧ್ಯಕ್ಷರ ಪೀಠದ ಎದುರಿನ ಅಂಗಳಕ್ಕೆ ಧಾವಿಸಿದ ಸಂಸದರು, ಮಸಿ ಬಳಿದಿದ್ದ ಪ್ರಕರಣವನ್ನು ಖಂಡಿಸಿ ಘೋಷಣೆ ಕೂಗಿದರು. ಮಹಾರಾಷ್ಟ್ರ ಸರ್ಕಾರ ಕೂಡಾ ಈ ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿತ್ತು.

ಅರವಿಂದ ಸಾವಂತ್‌ ಮತ್ತು ಶಿವಸೇನೆಯ ಇತರೆ ಸದಸ್ಯರು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ್ದು, ಬೊಮ್ಮಾಯಿ ರಾಜೀನಾಮೆಗೆ ಆಗ್ರಹಪಡಿಸುವ ಭಿತ್ತಿಪತ್ರ ಪ್ರದರ್ಶಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.