ADVERTISEMENT

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 10:44 IST
Last Updated 18 ಜನವರಿ 2021, 10:44 IST
ಶಿವಸೇನಾ
ಶಿವಸೇನಾ   

ಮುಂಬೈ: ಪಶ್ಚಿಮ ಬಂಗಾಳದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಶಿವಸೇನಾ ಪಕ್ಷವು ನಿರ್ಧರಿಸಿದೆ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಮತ್ತು ರಾಜ್ಯಸಭಾ ಸದಸ್ಯ ಸಂಜಯ್‌ ರಾವುತ್‌ ಅವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಶಿವಸೇನಾದ ಮುಖ್ಯ ವಕ್ತಾರ ಮತ್ತು ಸಾಮ್ನಾ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಸಂಜಯ್‌ ರಾವುತ್‌ ಅವರು,‘ ಪಕ್ಷದ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರೊಂದಿಗೆ ಚರ್ಚಿಸಿದ ನಂತರ ಶಿವಸೇನಾ ಪಕ್ಷವು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ನಾವು ಆದಷ್ಟು ಬೇಗ ಕೋಲ್ಕತ್ತ ತಲುಪಲಿದ್ದೇವೆ’ ಎಂದಿದ್ದಾರೆ.

ADVERTISEMENT

ಶಿವಸೇನಾದ ಹಿರಿಯ ನಾಯಕರ ತಂಡವು ಶೀಘ್ರದಲ್ಲೇ ಕೋಲ್ಕತ್ತಕ್ಕೆ ಭೇಟಿ ನೀಡಲಿದ್ದು, ಅಲ್ಲಿನ ಸ್ಥಳೀಯ ಘಟಕಗಳೊಂದಿಗೆ ಈ ಬಗ್ಗೆ ಚರ್ಚಿಸಲಿದೆ.

ಉದ್ಧವ್‌ ಠಾಕ್ರೆ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಉತ್ತಮ ಸಂಬಂಧವನ್ನು ಹೊಂದಿದ್ಧಾರೆ. ಹಾಗಾಗಿ ಈ ಬಾರಿಯ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯು ಭಾರಿ ಕೂತೂಹಲವನ್ನು ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.