ADVERTISEMENT

ಗೋವಾ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿಯೇ ಶಿವಸೇನಾ ಸ್ಪರ್ಧೆ: ಸಂಜಯ್ ರಾವುತ್

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 16:25 IST
Last Updated 1 ಅಕ್ಟೋಬರ್ 2021, 16:25 IST
ಸಂಜಯ್‌ ರಾವುತ್‌
ಸಂಜಯ್‌ ರಾವುತ್‌   

ಪಣಜಿ: ಗೋವಾ ವಿಧಾನಸಭೆಗೆ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಪಕ್ಷ ಏಕಾಂಗಿಯಾಗಿಯೇ ಸ್ಪರ್ಧಿಸಲಿದೆ ಎಂದು ಶಿವಸೇನಾ ರಾಷ್ಟ್ರೀಯ ವಕ್ತಾರ ಸಂಜಯ್ ರಾವುತ್‌ ಶುಕ್ರವಾರ ಇಲ್ಲಿ ಹೇಳಿದರು.

‘40 ಸ್ಥಾನಗಳ ಪೈಕಿ 22–25 ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಗೋವಾದಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘25 ವರ್ಷಗಳಿಂದ ಬಿಜೆಪಿ ಜೊತೆ ಶಿವಸೇನಾ ಮೈತ್ರಿ ಮಾಡಿಕೊಂಡಿತ್ತು. ಇದು ಗೋವಾದಲ್ಲಿ ಪಕ್ಷದ ಬೆಳವಣಿಗೆಗೆ ಅಡ್ಡಿಯಾಗಿತ್ತು. ಮಹಾರಾಷ್ಟ್ರದಲ್ಲಿಯೂ ಇದೇ ಸ್ಥಿತಿ ಇತ್ತು. ಆದರೆ, ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ಮಹಾರಾಷ್ಟ್ರದಲ್ಲಿ ಬಿಜೆಪಿ ಸಖ್ಯವನ್ನು ಕಡಿದುಕೊಳ್ಳಲು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ತೀರ್ಮಾನಿಸಿದರು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.