ADVERTISEMENT

ಗೋವಾ, ಉತ್ತರ ಪ್ರದೇಶ ಚುನಾವಣೆಯಲ್ಲಿ ಶಿವಸೇನಾ ಸ್ಪರ್ಧೆ: ಸಂಜಯ್‌ ರಾವುತ್‌

ಪಿಟಿಐ
Published 12 ಸೆಪ್ಟೆಂಬರ್ 2021, 8:22 IST
Last Updated 12 ಸೆಪ್ಟೆಂಬರ್ 2021, 8:22 IST
ಸಂಜಯ್‌ ರಾವುತ್‌
ಸಂಜಯ್‌ ರಾವುತ್‌   

ಮುಂಬೈ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ, ಗೋವಾ ಚುನಾವಣೆಯಲ್ಲಿ ಶಿವಸೇನಾ ಸ್ಪರ್ಧಿಸಲಿದೆ ಎಂದು ಸಂಸದ ಸಂಜಯ್ ರಾವುತ್‌ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಉತ್ತರ ಪ್ರದೇಶ ವಿಧಾನಸಭೆಯ 403 ಕ್ಷೇತ್ರಗಳ ಪೈಕಿ 80ರಿಂದ 100 ಸ್ಥಾನಗಳಲ್ಲಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಗೋವಾದ 40 ಸ್ಥಾನಗಳ ಪೈಕಿ 20ರಲ್ಲಿ ಪಕ್ಷದ ಅಭ್ಯರ್ಥಿಗಳು ಸೆಣೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ರೈತ ಸಂಘಟನೆಗಳು ತಮ್ಮ ಪಕ್ಷವನ್ನು ಬೆಂಬಲಿಸಲು ಸಿದ್ಧ ಇವೆ. ಅಂತೆಯೇ ಕೆಲ ಸಣ್ಣ ಪಕ್ಷಗಳೊಂದಿಗೆ ನಾವು ಮೈತ್ರಿ ಮಾಡಿಕೊಳ್ಳಬಹುದು. ಗೋವಾದಲ್ಲಿ ಎಂ.ವಿ.ಎ ರೀತಿಯ ಕೂಟ ರಚಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದರು.

ADVERTISEMENT

ಶಿವಸೇನಾ ಪಕ್ಷವು ಈ ಎರಡೂ ರಾಜ್ಯಗಳಲ್ಲಿ ತನ್ನ ಕಾರ್ಯಕರ್ತರನ್ನು ಹೊಂದಿದೆ. ಯಶಸ್ಸು ಅಥವಾ ವೈಫಲ್ಯವನ್ನು ಲೆಕ್ಕಿಸದೆ ಪಕ್ಷ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಅವರು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.