ADVERTISEMENT

UP: ಸಹರಾನ್‌ಪುರದಲ್ಲಿ ಶಿವ ದೇಗುಲದ ವಿಗ್ರಹ ಧ್ವಂಸ ಮಾಡಿದ ದುಷ್ಕರ್ಮಿಗಳು

ಪಿಟಿಐ
Published 2 ಅಕ್ಟೋಬರ್ 2025, 12:50 IST
Last Updated 2 ಅಕ್ಟೋಬರ್ 2025, 12:50 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಸಹರಾನ್‌ಪುರ: ಉತ್ತರ ಪ್ರದೇಶದ ಸಹರಾನ್‌ಪುರದ ಶಾಲೆಯ ಆವರಣದಲ್ಲಿರುವ ಪುರಾತನ ಶಿವ ದೇವಾಲಯದಲ್ಲಿ ವಿಗ್ರಹಗಳನ್ನು ಅಪರಿಚಿತ ವ್ಯಕ್ತಿಗಳು ಹಾನಿಗೊಳಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಚಾಪರ್ ಗ್ರಾಮದ ಶಿವ ಲಕ್ಷ್ಮಿ ಜೂನಿಯರ್ ಹೈಸ್ಕೂಲ್‌ನ ಆವರಣದಲ್ಲಿ ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ನಕುಡ್ ಎಸ್‌ಎಚ್‌ಒ ಅಶೋಕ್ ಸಿಸೋಡಿಯಾ ಪಿಟಿಐಗೆ ತಿಳಿಸಿದ್ದಾರೆ. ತುರ್ತು ಕರೆ ಸೇವೆಗಳ ಮೂಲಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ.

ADVERTISEMENT

ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದೂ ತಿಳಿಸಿದ್ದಾರೆ.

ದೇವಾಲಯವನ್ನು ಧ್ವಂಸ ಮಾಡಿದವರನ್ನು ಶೀಘ್ರದಲ್ಲೇ ಬಂಧಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಎಸ್‌ಎಚ್‌ಒ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.