ನವದೆಹಲಿ: ಛತ್ರಪತಿ ಶಿವಾಜಿ ಮಹಾರಾಜರ ಅದ್ಭುತ ಕೊಡುಗೆಗಳನ್ನು ಪಠ್ಯ ಪುಸ್ತಕಗಳಲ್ಲಿ ವಿಸ್ತೃತವಾಗಿ ಅಳವಡಿಸಬೇಕು ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಸಮಿತಿಗೆ (ಎನ್‌ಸಿಇಆರ್‌ಟಿ) ತಿಳಿಸಿರುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹೇಳಿದ್ದಾರೆ.
ಮಹಾರಾಷ್ಟ್ರ ಶಿಕ್ಷಣ ಸಚಿವ ದಾದಾಜಿ ಭುಸೆ ಅವರನ್ನು ಭೇಟಿ ಮಾಡಿದ ಬಳಿಕ ಸಾಮಾಜಿಕ ಜಾಲತಾಣ ‘ಎಕ್ಸ್’ ಖಾತೆಯಲ್ಲಿ ಪ್ರಧಾನ್ ಪೋಸ್ಟ್ ಮಾಡಿದ್ದಾರೆ.
‘ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗೆ ಶಿವಾಜಿಯ ಮಾದರಿ ಜೀವನ ಮತ್ತು ಪರಂಪರೆಯು ಸ್ಫೂರ್ತಿದಾಯಕವಾಗಿದೆ. ಹೀಗಾಗಿ ಈ ವಿಷಯಕ್ಕೆ ಪಠ್ಯಪುಸ್ತಕದಲ್ಲಿ ಸರಿಯಾದ ಸ್ಥಳಾವಕಾಶ ಸಿಗಬೇಕು’ ಎಂದು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.