
ಹೈದರಾಬಾದ್: ವ್ಯಕ್ತಿಯೊಬ್ಬ ಶಿವಲಿಂಗವನ್ನು ವಿರೂಪಗೊಳಿಸಿದ ಘಟನೆ ಆಂಧ್ರಪ್ರದೇಶದ ಐತಿಹಾಸಿಕ ದ್ರಾಕ್ಷಿರಾಮ ದೇವಾಲಯದಲ್ಲಿ ನಡೆದಿದೆ.
ಆರೋಪಿಯನ್ನು ರಾಮಚಂದ್ರಪುರ ಮಂಡಲದ ತೋಟಪೇಟ ನಿವಾಸಿ ಶ್ರೀಲಂ ಶ್ರೀನಿವಾಸ್ (38) ಎಂದು ಗುರುತಿಸಲಾಗಿದ್ದು, ಸೋಮವಾರ ರಾತ್ರಿ ಶಿವಲಿಂಗವನ್ನು ವಿರೂಪಗೊಳಿಸಿದ್ದಾನೆ ಎಂದು ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಮೀನಾ ಬುಧವಾರ ತಿಳಿಸಿದ್ದಾರೆ.
ದೇಗುಲದ ಸಿಬ್ಬಂದಿ ಜೊತೆಗಿನ ವೈಯಕ್ತಿಕ ದ್ವೇಷದ ಕಾರಣಕ್ಕೆ ಆರೋಪಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಸಿದ್ದಾರೆ.
ಆರೋಪಿ ಶಿವಲಿಂಗಕ್ಕೆ ಸುತ್ತಿಗೆಯಿಂದ ಹೊಡೆದು, ಅಲ್ಲಿಂದ ಪರಾರಿಯಾಗಿದ್ದ. ಸ್ಥಳೀಯರ ಮಾಹಿತಿ ಮತ್ತು ಸಿ.ಸಿ.ಟಿ.ವಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ, ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು. ಘಟನೆ ಬಳಿಕ, ಹೊಸ ಶಿವಲಿಂಗವನ್ನು ಸ್ಥಾಪಿಸಿ, ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಪಾರದರ್ಶಕವಾಗಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.