ADVERTISEMENT

ಗುಜರಾತ್‌ | ಶಿವರಾತ್ರಿ ದಿನದಂದೇ ಶಿವಲಿಂಗ ಕಳ್ಳತನ: ಪೊಲೀಸರಿಂದ ತನಿಖೆ ಚುರುಕು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಫೆಬ್ರುವರಿ 2025, 5:43 IST
Last Updated 26 ಫೆಬ್ರುವರಿ 2025, 5:43 IST
<div class="paragraphs"><p>ಸಂಗ್ರಹ ಚಿತ್ರ&nbsp;</p></div>

ಸಂಗ್ರಹ ಚಿತ್ರ 

   

ಗಾಂಧಿನಗರ: ಗುಜರಾತ್‌ನ ದ್ವಾರಕಾ ಜಿಲ್ಲೆಯ ಭಿದ್ಭಂಜನ ಭವಾನೀಶ್ವರ ಮಹಾದೇವ ದೇವಸ್ಥಾನದಲ್ಲಿ ಇಂದು (ಬುಧವಾರ) ಶಿವಲಿಂಗವನ್ನು ಕಳ್ಳತನ ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಈ ಸಂಬಂಧ ಸುದ್ದಿಸಂಸ್ಥೆ ‘ಎಎನ್‌ಐ‘ ಟ್ವೀಟ್‌ ಉಲ್ಲೇಖಿಸಿ ವರದಿ ಮಾಡಿದೆ.

ADVERTISEMENT

ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದು, ಅನೇಕ ತಂಡಗಳನ್ನು ರಚಿಸಲಾಗಿದೆ ಎಂದು ದ್ವಾರಕಾ ಪೊಲೀಸ್ ವರಿಷ್ಠಾಧಿಕಾರಿ ನಿತೇಶ್ ಪಾಂಡೆ ಮಾಹಿತಿ ನೀಡಿದ್ದಾರೆ.

‘ದೇವಾಲಯದಲ್ಲಿದ್ದ ಲಿಂಗವನ್ನು ಕಳ್ಳತನ ಮಾಡಿದ್ದಾರೆ ಎಂದು ಅರ್ಚಕರು ತಿಳಿಸಿದ್ದಾರೆ. ಆದರೆ ಕಳ್ಳತನವಾಗಿರುವ ವಿಗ್ರಹವನ್ನು ದುಷ್ಕರ್ಮಿಗಳು ಹತ್ತಿರದ ಸಮುದ್ರದಲ್ಲಿ ಅಡಗಿಸಿಟ್ಟಿರುವ ಸಾಧ್ಯತೆಗಳಿವೆ. ಹೀಗಾಗಿ ಸ್ಕೂಬಾ ಡೈವಿಂಗ್‌ ಮೂಲಕ ಸಮುದ್ರದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ' ಎಂದು ಪಾಂಡೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.