ಲಖನೌ: ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ತೆರವುಗೊಳಿಸಿದ ಬಂಗ್ಲೆಯನ್ನು ಹಿರಿಯ ಶಾಸಕ ಶಿವಪಾಲ್‌ಯಾದವ್‌ಗೆ ನೀಡಿ ಯೋಗಿ ಆದಿತ್ಯನಾಥ್ ಸರ್ಕಾರ ಕ್ರಮ ಕೈಗೊಂಡಿದೆ.
‘ನನ್ನ ಜೀವಕ್ಕೆ ಅಪಾಯವಿದೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಈ ಬಂಗ್ಲೆಯನ್ನು ಸರ್ಕಾರ ನೀಡಿದೆ’ ಎಂದು ಶಿವಪಾಲ್ ಯಾದವ್ ಸಮರ್ಥಿಸಿಕೊಂಡಿದ್ದಾರೆ. ಶಿವಪಾಲ್ ಯಾದವ್ ಅವರು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂಸಿಂಗ್ ಯಾದವ್ ಅವರ ಸಹೋದರ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ.
‘ನಾನು ಐದು ಬಾರಿ ಶಾಸಕನಾಗಿದ್ದು, ಸದನದಲ್ಲಿ ಅತ್ಯಂತ ಹಿರಿಯ ಸದಸ್ಯನಾಗಿದ್ದೇನೆ’ ಎಂದರು.
‘ಲಾಲ್ ಬಹಾದ್ದೂರ್ ಶಾಸ್ತ್ರಿ ಮಾರ್ಗದಲ್ಲಿಬಂಗ್ಲೆ ನೀಡುವಂತೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದೆ. ಸರ್ಕಾರದ ಎಲ್ಲ ನಿಯಮಗಳನ್ನು ಆಧರಿಸಿಯೇ, ಬಂಗ್ಲೆ ನೀಡಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.