ADVERTISEMENT

ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ: ಇಂದು ಶಿವರಾಜ್‌ ಸಿಂಗ್ ಚೌಹಾಣ್ ಪ್ರಮಾಣವಚನ?

ಏಜೆನ್ಸೀಸ್
Published 23 ಮಾರ್ಚ್ 2020, 12:30 IST
Last Updated 23 ಮಾರ್ಚ್ 2020, 12:30 IST
ಶಿವರಾಜ್‌ ಸಿಂಗ್ ಚೌಹಾಣ್ (ಸಂಗ್ರಹ ಚಿತ್ರ)
ಶಿವರಾಜ್‌ ಸಿಂಗ್ ಚೌಹಾಣ್ (ಸಂಗ್ರಹ ಚಿತ್ರ)   

ಭೋಪಾಲ: ಮಧ್ಯಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿಯಾಗಿ ಇಂದು ರಾತ್ರಿ ಶಿವರಾಜ್‌ ಸಿಂಗ್ ಚೌಹಾಣ್ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಒಟ್ಟು 22 ಶಾಸಕರ ರಾಜೀನಾಮೆಯಿಂದಾಗಿ ಕಾಂಗ್ರೆಸ್‌ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಕಮಲ್ ನಾಥ್ ಅವರು ಕಳೆದ ಶುಕ್ರವಾರ ರಾಜೀನಾಮೆ ನೀಡಿದ್ದರು. ಇದರೊಂದಿಗೆ ಕಾಂಗ್ರೆಸ್ ಸರ್ಕಾರ ಪತನವಾಗಿತ್ತು.

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದ ಬಳಿಕ ಮಧ್ಯಪ್ರದೇಶ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿತ್ತು. 22 ಬಂಡಾಯ ಶಾಸಕರು ರಾಜೀನಾಮೆ ನೀಡಿದ್ದರು. ಈ ಪೈಕಿ 6 ಶಾಸಕರ ರಾಜೀನಾಮೆ ಅಂಗೀಕಾರವಾಗಿದ್ದು, ಉಳಿದವರದ್ದು ಇತ್ಯರ್ಥವಾಗದೆ ಉಳಿದುಕೊಂಡಿತ್ತು. ಶುಕ್ರವಾರ 16 ಶಾಸಕರ ರಾಜೀನಾಮೆಯನ್ನುವಿಧಾನಸಭೆ ಸ್ಪೀಕರ್ ಎನ್‌.ಪಿ. ಪ್ರಜಾಪತಿ ಅಂಗೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.