ಭೋಪಾಲ್: 2019ರಲ್ಲಿ ನಡೆದ ಲೋಕಸಭಾ ಚುನಾವಣೆ ವೇಳೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ರಾಹುಲ್ ಗಾಂಧಿ ಭಾಷಣದ ವಿಡಿಯೊ ತುಣುಕು ನಕಲಿ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದು, ಈ ಸಂಬಂಧ ಚೌಹಾಣ್ ವಿರುದ್ಧ ಎಫ್‌ಐಆರ್ ದಾಖಲಿಸುವುದಾಗಿ ಮಂಗಳವಾರ ಹೇಳಿದ್ದಾರೆ.
‘ನನ್ನ ವಿರುದ್ಧ ಶಿವರಾಜ್ ಸಿಂಗ್ ಚೌಹಾಣ್ ದೂರು ದಾಖಲಿಸಿದ್ದ ಪೊಲೀಸ್ ಠಾಣೆಯಲ್ಲಿಯೇ ಅವರ ವಿರುದ್ಧ ದೂರು ಸಲ್ಲಿಸಲು ಹೋಗಿದ್ದೆ’ ಎಂದು ದಿಗ್ವಿಜಯ ಸಿಂಗ್ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಅವರು ಭಾಷಣ ಇರುವ ವಿಡಿಯೊ ಹಾಗೂ ಆ ವಿಡಿಯೊ ಕುರಿತು ಚೌಹಾಣ್ ಅವರು 2019ರ ಮೇ 16ರಂದು ಮಾಡಿದ್ದ ಟ್ವೀಟ್ ಅನ್ನು ಸಹ ದಿಗ್ವಿಜಯ್ ಸಿಂಗ್ ಹಂಚಿಕೊಂಡಿದ್ದಾರೆ.
2019ರ ಮೇ 14ರಂದು ಮಧ್ಯಪ್ರದೇಶದ ನೀಮುಚ್ ಎಂಬಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ಭಾಷಣ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.