ADVERTISEMENT

ಜೆಎನ್‌ಯುನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿದ ಅರವಿಂದ ಕೇಜ್ರಿವಾಲ್

ಪಿಟಿಐ
Published 5 ಜನವರಿ 2020, 16:04 IST
Last Updated 5 ಜನವರಿ 2020, 16:04 IST
ಅರವಿಂದಕೇಜ್ರಿವಾಲ್
ಅರವಿಂದಕೇಜ್ರಿವಾಲ್   

ನವದೆಹಲಿ:ಜೆಎನ್‌ಯುನಲ್ಲಿ ನಡೆದ ಹಿಂಸಾಚಾರ ಸುದ್ದಿ ಆಘಾತವನ್ನುಂಟು ಮಾಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.

ವಿದ್ಯಾರ್ಥಿಗಳ ಮೇಲೆ ಗಂಭೀರ ಹಲ್ಲೆ ನಡೆದಿದೆ.ಪೊಲೀಸರು ತಕ್ಷಣವೇ ಹಿಂಸಾಚಾರವನ್ನು ನಿಲ್ಲಿಸಿ ಶಾಂತಿ ಸ್ಥಾಪಿಸಬೇಕು. ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ವಿದ್ಯಾರ್ಥಿಗಳು ಸುರಕ್ಷಿತರಾಗಿಲ್ಲದಿರುವಾಗದೇಶ ಹೇಗೆ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ಕೇಜ್ರಿವಾಲ್ ಟ್ವೀಟಿಸಿದ್ದಾರೆ.

ಜೆಎನ್‌ಯು ಶಿಕ್ಷಕರ ಸಂಘಟನೆ ಆಯೋಜಿಸಿದ್ದ ಸಾರ್ವಜನಿಕ ಸಭೆ ವೇಳೆ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗಳ ಯೂನಿಯನ್ ಮತ್ತು ಎಬಿವಿಪಿ ನಡುವೆ ಘರ್ಷಣೆಯುಂಟಾಗಿದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ :ಮುಖವಾಡ ಧರಿಸಿದ ದುಷ್ಕರ್ಮಿಗಳಿಂದಜೆಎನ್‌ಯು ವಿದ್ಯಾರ್ಥಿ, ಶಿಕ್ಷಕರ ಮೇಲೆ ಹಲ್ಲೆ

ವಿದ್ಯಾರ್ಥಿ ಸಂಘಟನೆಗಳ ಅಧ್ಯಕ್ಷೆ ಆಶೆ ಘೋಷ್ ಮತ್ತು ಇತರ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಸದಸ್ಯರು ಗಂಭೀರ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳ ಯೂನಿಯನ್ ಆರೋಪಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.