ಶ್ರೀನಗರ: ಜಮ್ಮು–ಕಾಶ್ಮೀರದ ಶೋಪಿಯಾನ್‌ನಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
‘ಉಗ್ರರು ಅಡಗಿರುವ ಕುರಿತು ದೊರಕಿದ ಮಾಹಿತಿ ಆಧರಿಸಿ ಭದ್ರತಾ ಪಡೆ ಸಿಬ್ಬಂದಿ, ಶೋಪಿಯಾನ್‌ನ ದರಮ್‌ದೋರಾ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದರು. ಇದಕ್ಕೆ ತಕ್ಕ ಪ್ರತಿದಾಳಿ ನಡೆಸಿ ಉಗ್ರರನ್ನು ಹತ್ಯೆ ಮಾಡಲಾಯಿತು’ ಎಂದು ಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತ ಉಗ್ರರು ಯಾವ ಗುಂಪಿಗೆ ಸೇರಿದವರು ಎಂದು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.