ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದು, ಶೋಧ ಕಾರ್ಯಾಚರಣೆ ನಡೆಸಿವೆ.
ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆ ಪ್ರತಿದಾಳಿ ನಡೆಸಿವೆ. ದಟ್ಟ ಕಾಡಿನಲ್ಲಿ ಮೂವರು ಭಯೋತ್ಪಾದಕರ ಶವಗಳು ಪತ್ತೆಯಾಗಿವೆ. ಶವಗಳನ್ನು ಇನ್ನೂ ಹೊರತೆಗೆಯಲಾಗಿಲ್ಲ. ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರು ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಶಂಕಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.