ADVERTISEMENT

ಶೋಪಿಯಾನ್‌: ಎನ್‌ಕೌಂಟರ್‌ ಸ್ಥಳದಿಂದ ಇಬ್ಬರು ಉಗ್ರರು ಪರಾರಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 13:07 IST
Last Updated 27 ಜನವರಿ 2022, 13:07 IST
   

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ನೌಗಮ್‌ ಗ್ರಾಮದಲ್ಲಿ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳಿಗೆ ಸಿಕ್ಕಿಬಿದ್ದಿದ್ದ ವಿದೇಶಿಗ ಸೇರಿ ಇಬ್ಬರು ಉಗ್ರರು ಪರಾರಿಯಾಗಿದ್ದಾರೆ.

‘ಉಗ್ರರು ಅಡಗಿರುವ ಮಾಹಿತಿ ಮೇರೆಗೆ ನೌಗಮ್‌ ಗ್ರಾಮದಲ್ಲಿ ಬುಧವಾರ (ಜ.26) ರಾತ್ರಿ ಸ್ಥಳೀಯ ಪೊಲೀಸ್‌ ಹಾಗೂ ಸೇನೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಗ್ಗತ್ತಲು ಆವರಿಸಿದ್ದ ಕಾರಣ ಹಾಗೂ ಅಲ್ಲಿನ ನಾಗರಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಲ್ಲಿ ಭದ್ರತಾ ಪಡೆಗಳು ನಿರತರಾಗಿದ್ದಾಗ ಪಾಕ್‌ ಮೂಲದ ಭಯೋತ್ಪಾದಕ ಸೇರಿ ಇಬ್ಬರು ಉಗ್ರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ’ ಎಂದು ಕಾಶ್ಮೀರ ವಲಯ ಐಜಿಪಿ ವಿಜಯಕುಮಾರ್‌ ತಿಳಿಸಿದರು.

‘ಕಾರ್ಯಾಚರಣೆ ವೇಳೆ ನಡೆದ ಆರಂಭಿಕ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ತೀವ್ರವಾಗಿ ಗಾಯಗೊಂಡಿದ್ದು, ನಂತರ ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಯಿತು’ ಎಂದು ಅವರು ಹೇಳಿದರು.

ADVERTISEMENT

ಕಾಶ್ಮೀರ ಕಣಿವೆಯಲ್ಲಿ ಈ ವರ್ಷ 16 ಉಗ್ರರನ್ನು ಹತ್ಯೆಮಾಡಲಾಗಿದ್ದು, ಕಳೆದ ವರ್ಷ 73 ವಿದೇಶಿ ಭಯೋತ್ಪಾದಕರು ಸೇರಿ 171 ಉಗ್ರರನ್ನು ಹತ್ಯೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.