ಪುದುಚೇರಿ: ‘ಅಂಗಡಿ, ಸಂಸ್ಥೆಗಳ ನಾಮಫಲಕಗಳನ್ನು ತಮಿಳಿನಲ್ಲಿ ಹಾಕುವುದನ್ನು ಕಡ್ಡಾಯಗೊಳಿಸುವ ಸುತ್ತೋಲೆ ಹೊರಡಿಸಲಾಗುವುದು’ ಎಂದು ಪುದುಚೇರಿ ಮುಖ್ಯಮಂತ್ರಿ ಎನ್.ರಂಗಸ್ವಾಮಿ ತಿಳಿಸಿದ್ದಾರೆ.
ಅಧಿವೇಶನದಲ್ಲಿ ಶೂನ್ಯವೇಳೆಯಲ್ಲಿ ಪಕ್ಷೇತರ ಶಾಸಕ ಜಿ.ನೆಹರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,
‘ಅಂಗಡಿಗಳ ಮೇಲೆ ನಾಮಫಲಕಗಳನ್ನು ತಮಿಳಿನಲ್ಲಿ ಪ್ರದರ್ಶಿಸುವಂತೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.
‘ಈ ಆದೇಶವನ್ನು ಉಲ್ಲಂಘಿಸಿದರೆ, ಅಂತಹವರ ವಿಚಾರದಲ್ಲಿ ದಯೆ ತೋರುವ ಅಗತ್ಯವಿಲ್ಲ. ಈ ವಿಚಾರದಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ನೆಹರು ಕೂಡ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ರಂಗಸ್ವಾಮಿ, ‘ಸರ್ಕಾರದ ಎಲ್ಲ ಕಾರ್ಯಕ್ರಮಗಳ ಆಹ್ವಾನ ಪತ್ರಗಳಲ್ಲಿಯೂ ತಮಿಳು ಒಳಗೊಂಡಿರಬೇಕು ಎಂದು ನಿರ್ಧರಿಸಲಾಗಿದೆ. ಇದು ತಮಿಳು ಭಾಷೆ ಬಗ್ಗೆ ಹೊಂದಿರುವ ಗೌರವ ಹಾಗೂ ಪ್ರೀತಿಯ ದ್ಯೋತಕವಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.