ADVERTISEMENT

ಪುಣೆಯಲ್ಲಿ ಬೆಂಕಿ ಅವಘಡ: 500ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಏಜೆನ್ಸೀಸ್
Published 27 ಮಾರ್ಚ್ 2021, 5:35 IST
Last Updated 27 ಮಾರ್ಚ್ 2021, 5:35 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಪುಣೆ: ಇಲ್ಲಿನ ಫ್ಯಾಶನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ನಿನ್ನೆ(ಶುಕ್ರವಾರ) ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ 500ಕ್ಕೂ ಹೆಚ್ಚು ಅಂಗಡಿಗಳು ಸುಟ್ಟುಹೋಗಿವೆ.

ಬೆಂಕಿಯನ್ನು ನಂದಿಸಲು ಸುಮಾರು 16 ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

'ನಿನ್ನೆ ರಾತ್ರಿ ಒಂದು ಗಂಟೆ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಕಾರ್ಯಾಚರಣೆ ಮುಂದುವರೆದಿದ್ದು, 60 ಅಗ್ನಿಶಾಮಕ ಅಧಿಕಾರಿಗಳು ಸ್ಥಳದಲ್ಲಿದ್ದಾರೆ' ಎಂದು ಪುಣೆ ಮಹಾನಗರ ಪಾಲಿಕೆಯ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ADVERTISEMENT

'ಇಲ್ಲಿಯವರೆಗೆ ಯಾವುದೇ ವ್ಯಕ್ತಿಯ ಜೀವಕ್ಕೆ ಅಪಾಯವಾಗಿಲ್ಲ. ಆದರೆ, ವ್ಯಾಪಾರಿಗಳಿಗೆ ಹಾಗೂ ಅಂಗಡಿಗಳ ಮಾಲೀಕರಿಗೆ ಆರ್ಥಿಕವಾಗಿ ಭಾರಿ ನಷ್ಟವಾಗಿದೆ' ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.