ADVERTISEMENT

PHOTOS | ಶುಭಾಂಶು ಶುಕ್ಲಾ ಅಂತರಿಕ್ಷಯಾನ: ಹೀಗಿತ್ತು ಪೋಷಕರ ಪ್ರತಿಕ್ರಿಯೆ...

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಜೂನ್ 2025, 10:00 IST
Last Updated 25 ಜೂನ್ 2025, 10:00 IST
<div class="paragraphs"><p>ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಇಂದು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದಾರೆ.</p></div>

ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಇಂದು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದಾರೆ.

   

ಚಿತ್ರ ಕೃಪೆ: SpaceX

ಸ್ಪೇಸ್‌ಎಕ್ಸ್‌ನ 'ಫಾಲ್ಕನ್‌–9' ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಚಿಮ್ಮಿತು.

ADVERTISEMENT

ಶುಭಾಂಶು ಅವರನ್ನು ಹೊತ್ತ ನೌಕೆ ನಭಕ್ಕೆ ಚಿಮ್ಮುತ್ತಿದ್ದಂತೆ ಲಖೌನದಲ್ಲಿ ನೇರಪ್ರಸಾರ ವೀಕ್ಷಿಸುತ್ತಿದ್ದ ಪೋಷಕರು ಭಾವುಕರಾದರು

ಶುಭಾಂಶು ಶುಕ್ಲಾ ಅವರಿಗೆ ಕುಟುಂಬ ಸದಸ್ಯರು ಶುಭ ಹಾರೈಸಿದರು

ಆಕ್ಸಿಯಂ–4 ಅಂತರಿಕ್ಷಯಾನಕ್ಕೆ ಶುಭ ಹಾರೈಸಿದ ವಿದ್ಯಾರ್ಥಿಗಳು

ಭಾರತೀಯ ಗಗನ ಯಾತ್ರಿ ಶುಭಾಂಶು ಶುಕ್ಲಾ

ಕಮಾಂಡರ್ ಪೆಗ್ಗಿ ವಿಟ್ಸನ್ ನೇತೃತ್ವದಲ್ಲಿ, ಶುಕ್ಲಾ, ಹಂಗರಿಯ ಟಿಬೊರ್ ಕಾಪು, ಪೋಲೆಂಡ್‌ನ ಸ್ಲಾವೋಜ್ ವಿಸ್‌ನೀವ್‌ಸ್ಕಿ ಗಗನಯಾನ ಕೈಗೊಂಡಿದ್ದಾರೆ

'ಆ್ಯಕ್ಸಿಯಂ–4' ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು (ಜೂನ್‌ 25) ಮಧ್ಯಾಹ್ನ 12.01ಕ್ಕೆ (ಭಾರತೀಯ ಕಾಲಮಾನ) ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಪ್ರಯಾಣ ಬೆಳೆಸಿದ್ದಾರೆ.

ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಕೈಗೊಂಡ ಎರಡನೇ ಭಾರತೀಯ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಸ್ಪೇಸ್‌ಎಕ್ಸ್‌ನ 'ಫಾಲ್ಕನ್‌–9' ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಚಿಮ್ಮುತ್ತಿದ್ದಂತೆ ಜನರು ಸಂಭ್ರಮಿಸಿದರು

ಇಂದು (ಜೂನ್‌ 25) ಮಧ್ಯಾಹ್ನ 12.01ಕ್ಕೆ (ಭಾರತೀಯ ಕಾಲಮಾನ) ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಚಿಮ್ಮಿದ ಸ್ಪೇಸ್‌ಎಕ್ಸ್‌ನ 'ಫಾಲ್ಕನ್‌–9' ರಾಕೆಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.