ADVERTISEMENT

ಮಕ್ಬೂಲ್ ಭಟ್‌ ಗಲ್ಲಿಗೇರಿಸಿ 37 ವರ್ಷ: ಕಣಿವೆ ರಾಜ್ಯದಾದ್ಯಂತ ಬಂದ್‌

ಪಿಟಿಐ
Published 11 ಫೆಬ್ರುವರಿ 2021, 8:09 IST
Last Updated 11 ಫೆಬ್ರುವರಿ 2021, 8:09 IST
ಮೊಹಮ್ಮದ್ ಮಕ್ಬೂಲ್ ಭಟ್‌ ನೇಣಿಗೇರಿದ 37ನೇ ವರ್ಷದ ಸ್ಮರಣೋತ್ಸವದ ಅಂಗವಾಗಿ ಜೆಕೆಎಲ್ಎಫ್ ಸಂಘಟನೆಯಿಂದ ಗುರುವಾರ ಬಂದ್‌ಗೆ ಕರೆ; ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀನಗರದಲ್ಲಿ ನಿಯೋಜಿಸಲಾಗಿರುವ ಭದ್ರತಾ ಸಿಬ್ಬಂದಿ
ಮೊಹಮ್ಮದ್ ಮಕ್ಬೂಲ್ ಭಟ್‌ ನೇಣಿಗೇರಿದ 37ನೇ ವರ್ಷದ ಸ್ಮರಣೋತ್ಸವದ ಅಂಗವಾಗಿ ಜೆಕೆಎಲ್ಎಫ್ ಸಂಘಟನೆಯಿಂದ ಗುರುವಾರ ಬಂದ್‌ಗೆ ಕರೆ; ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀನಗರದಲ್ಲಿ ನಿಯೋಜಿಸಲಾಗಿರುವ ಭದ್ರತಾ ಸಿಬ್ಬಂದಿ   

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್ಎಫ್) ಸ್ಥಾಪಕ ಮೊಹಮ್ಮದ್ ಮಕ್ಬೂಲ್ ಭಟ್‌ ನೇಣಿಗೇರಿದ 37ನೇ ವರ್ಷದ ಸ್ಮರಣೋತ್ಸವದ ಅಂಗವಾಗಿ ಜೆಕೆಎಲ್‌ಎಫ್‌ ಸಂಘಟನೆಯುಕಾಶ್ಮೀರದಲ್ಲಿ ಗುರುವಾರ ಬಂದ್‌ಗೆ ಕರೆ ನೀಡಿದೆ. ಇದರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಶ್ರೀನಗರದಲ್ಲಿ ಹೆಚ್ಚಿನ ಅಂಗಡಿಗಳು, ಪೆಟ್ರೋಲ್‌ ಬಂಕ್‌ಗಳು ಸೇರಿದಂತೆ ಹಲವು ವಾಣಿಜ್ಯ ಮಳಿಗೆಗಳು ಮುಚ್ಚಿವೆ. ಅಲ್ಲದೆ ಸಾರ್ವಜನಿಕ ಸಾರಿಗೆ ಬಸ್‌ಗಳು ಕೂಡ ರಸ್ತೆಗೆ ಇಳಿದಿಲ್ಲ’ ಎಂದು ಅವರು ಹೇಳಿದರು.

ಆದರೆ ನಗರದಲ್ಲಿ ಖಾಸಗಿ ಕಾರುಗಳು, ಆಟೋ ರಿಕ್ಷಾ ಮತ್ತು ಕ್ಯಾಬ್‌ಗಳು ಓಡಾಡುತ್ತಿವ ಎಂದು ಅವರು ಮಾಹಿತಿ ನೀಡಿದರು.

ADVERTISEMENT

‘ಜಮ್ಮು ಮತ್ತು ಕಾಶ್ಮೀರದ ಇತರೆ ಜಿಲ್ಲೆಗಳಲ್ಲೂ ಬಂದ್‌ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಅವರು ತಿಳಿಸಿದರು.

ಸಂಸತ್‌ ಭವನದ ಮೇಲಿನ ದಾಳಿಯ ರೂವಾರಿ ಅಫ್ಜಲ್‌ ಗುರುವನ್ನು ಫೆಬ್ರುವರಿ 23, 2013 ರಂದು ತಿಹಾರ್‌ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು. ಜೆಕೆಎಲ್ಎಫ್ ಸ್ಥಾಪಕ ಮೊಹಮ್ಮದ್ ಮಕ್ಬೂಲ್ ಭಟ್‌ನನ್ನು ಫೆಬ್ರುವರಿ 11, 1984 ರಂದು ತಿಹಾರ್‌ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜೆಕೆಎಲ್ಎಫ್ ಸಂಘಟನೆಯು ಇವರಿಬ್ಬರ ಸ್ಮರಣಾರ್ಥ ಫೆಬ್ರುವರಿ 9 ಮತ್ತು 11 ರಂದು ಜಮ್ಮು ಮತ್ತು ಕಾಶ್ಮೀರದಾದ್ಯಂತ ಬಂದ್‌ಗೆ ಕರೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.