ಮುಂಬೈ: ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ವಿಶೇಷ ನ್ಯಾಯಾಲಯವು 13 ಮಂದಿ ಆರೋಪಿಗಳನ್ನು ಡಿ.16ರವರೆಗೆ ಪೊಲೀಸರ ವಶಕ್ಕೆ ಒಪ್ಪಿಸಿದೆ.
ಉನ್ನತ ಮಟ್ಟದ ಪ್ರಕರಣದ ತನಿಖೆ ಆರಂಭಿಸಿದ್ದ ಮುಂಬೈ ಕ್ರೈಂ ಬ್ರಾಂಚ್ ತಂಡವು, ಹತ್ಯೆಗೈದ ಶೂಟರ್ ಶಿವಕುಮಾರ್ ಗೌತಮ್ ಸೇರಿದಂತೆ 26 ಮಂದಿ ಆರೋಪಿಗಳನ್ನು ಬಂಧಿಸಿತ್ತು. ಬಂಧಿತರನ್ನು ನ.30ರಂದು ಮಹಾರಾಷ್ಟ್ರ ಸಂಘಟಿತ ಅಪರಾಧ ಕೃತ್ಯಗಳ ನಿಯಂತ್ರಣ ಕಾಯ್ದೆ(ಎಂಸಿಒಸಿಎ) ಅಡಿಯಲ್ಲಿ ಪರಿಗಣಿಸಿತ್ತು.
ಇವರಲ್ಲಿ 13 ಮಂದಿಯನ್ನು ವಿಶೇಷ ನ್ಯಾಯಾಲಯದ ಮುಂದೆ ಸೋಮವಾರ ಹಾಜರುಪಡಿಸಲಾಗಿತ್ತು. ಅಪರಾಧ ಕೃತ್ಯಕ್ಕೆ ಸಂಬಂಧಿಸಿದಂತೆ ಹಣಕಾಸು ಆಯಾಮದ ಕುರಿತಂತೆ ಹೆಚ್ಚಿನ ವಿಚಾರಣೆ ನಡೆಸಲು ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಪೊಲೀಸರು ಮಾಡಿದ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.