ADVERTISEMENT

ಗಾಯಕ ಮೂಸೆವಾಲಾ ಹತ್ಯೆ: 8 ಮಂದಿ ಆರೋಪಿಗಳ ಸೆರೆ

ಪಿಟಿಐ
Published 7 ಜೂನ್ 2022, 11:21 IST
Last Updated 7 ಜೂನ್ 2022, 11:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಂಡೀಗಡ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

ಗಾಯಕನ ಮೇಲೆ ಗುಂಡಿನ ದಾಳಿ ನಡೆಸಿದವರಿಗೆ ರಕ್ಷಣೆ, ಸ್ಥಳದ ಬಗ್ಗೆ ಮಾಹಿತಿ ಸಂಗ್ರಹಣೆ ಮತ್ತು ಸರಕು ಸಹಕಾರ ನೀಡಿದ ಆರೋಪದ ಮೇರೆಗೆ ಈ ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ, ಗಾಯಕನ ಮೇಲೆ ಗುಂಡಿನ ದಾಳಿ ನಡೆಸಿದ ನಾಲ್ವರನ್ನು ಗುರುತಿಸಲಾಗಿದೆ ಎಂದು ಮಂಗಳವಾರ ಪೊಲೀಸರು ಹೇಳಿದ್ದಾರೆ.

ಪಂಜಾಬ್‌ನ ಮಾನ್ಸ ಜಿಲ್ಲೆಯಲ್ಲಿ ಮೇ 29ರಂದು ಮೂಸೆವಾಲಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಲೆ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.