ADVERTISEMENT

ಸಿಎಂ ಅಮರಿಂದರ್ ಸಮ್ಮುಖದಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಿಧು ಪ್ರಮಾಣ

ಪಿಟಿಐ
Published 23 ಜುಲೈ 2021, 8:23 IST
Last Updated 23 ಜುಲೈ 2021, 8:23 IST
ನವಜೋತ್ ಸಿಂಗ್ ಸಿಧು ಹಾಗೂ ಅಮರಿಂದರ್ ಸಿಂಗ್
ನವಜೋತ್ ಸಿಂಗ್ ಸಿಧು ಹಾಗೂ ಅಮರಿಂದರ್ ಸಿಂಗ್    

ಚಂಡೀಗಡ: ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಉಪಸ್ಥಿತಿಯಲ್ಲಿ ಪಂಜಾಬ್‌ ಪ್ರದೇಶ ಕಾಂಗ್ರೆಸ್‌ ಸಮಿತಿ (ಪಿಪಿಸಿಸಿ) ಅಧ್ಯಕ್ಷರಾಗಿ ನವಜೋತ್‌ ಸಿಂಗ್‌ ಸಿಧು ಶುಕ್ರವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ರಾಜ್ಯದ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರತಿಕ್ರಿಯಿಸಿದ ಸಿಧು, 'ಪಕ್ಷದ ಸಾಮಾನ್ಯ ಕಾರ್ಯಕರ್ತ ಮತ್ತು ರಾಜ್ಯ ಘಟಕದ ಅಧ್ಯಕ್ಷರ ನಡುವೆ ಯಾವುದೇ ವ್ಯತ್ಯಾಸ ಇಲ್ಲ' ಎಂದು ಹೇಳಿದ್ದಾರೆ.

ಕ್ರಿಕೆಟ್ ವೃತ್ತಿ ಜೀವನದ ಬಳಿಕ ರಾಜಕೀಯ ರಂಗಕ್ಕೆ ಪ್ರವೇಶ ಮಾಡಿರುವ ಸಿಧು, ಅಮೃತಸರ (ಪೂರ್ವ) ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.

ADVERTISEMENT

ಸಿಧು ಹಾಗೂ ಅಮರಿಂದರ್ ನಡುವಣ ಭಿನ್ನಾಭಿಪ್ರಾಯವು ಕಾಂಗ್ರೆಸ್ ಆಂತರಿಕ ಕಲಹಕ್ಕೆ ಕಾರಣವಾಗಿತ್ತು. ಸಿಧು ಅವರು ಟ್ವೀಟ್‌ ಮೂಲಕ ಅಮರಿಂದರ್‌ ಸಿಂಗ್‌ ವಿರುದ್ಧ ಕಟುವಾಗಿ ಟೀಕಿಸಿದ್ದರು. ಇದರಿಂದಾಗಿ ಸಿಧು ಸಾರ್ವಜನಿಕವಾಗಿ ಕ್ಷಮೆಯಾಚಿಸದ ಹೊರತು ಅಮರಿಂದರ್ ಭೇಟಿಯಾಗುವುದಿಲ್ಲ ಎಂದು ಸಿಎಂ ಮಾಧ್ಯಮ ಸಲಹೆಗಾರ ಹೇಳಿಕೆ ನೀಡಿದ್ದರು.

ಗುರುವಾರದಂದು ರಾಜ್ಯ ಕಾಂಗ್ರೆಸ್‌ ಘಟಕಕ್ಕೆ ಹೊಸದಾಗಿ ನೇಮಕಗೊಂಡ ನಾಲ್ವರು ಕಾರ್ಯಾಧ್ಯಕ್ಷರ ಪೈಕಿ ಕುಲ್ಜಿತ್ ಸಿಂಗ್ ನಾಗ್ರಾ ಮತ್ತು ಸಂಗತ್ ಸಿಂಗ್ ಗಿಲ್ಜಿಯಾನ್ ಅವರು ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಅಮರಿಂದರ್‌ ಸಿಂಗ್‌ ಅವರನ್ನು ಆಹ್ವಾನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.