ಗ್ಯಾಂಗ್ಟಕ್: ಜೂನ್ 1 ರಂದು ಉತ್ತರ ಸಿಕ್ಕಿಂನ ಛಟೆನ್‌ನಲ್ಲಿ ಭೂಕುಸಿತ ಸಂಭವಿಸಿದ್ದು, 6 ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ಇಬ್ಬರ ಮೃತದೇಹಗಳು ಇಂದು (ಮಂಗಳವಾರ) ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪುರುಷ ಮತ್ತು ಮಹಿಳೆಯ ಶವಗಳು ಪತ್ತೆಯಾಗಿವೆ. ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ಛಟೆನ್‌ನ ಸೇನಾ ಶಿಬಿರದಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ 6 ಜನರಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿವೆ. ಸೋಮವಾರ ಸೈನುದ್ದೀನ್ ಎಂಬ ಸೇನಾಧಿಕಾರಿ ಮೃತದೇಹ ಪತ್ತೆಯಾಗಿತ್ತು. ಇಂದು ಇಬ್ಬರ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.