ADVERTISEMENT

ಎಸ್‌ಐಎಂಐ ಸಂಘಟನೆ ರದ್ದತಿ ಅವಧಿ ವಿಸ್ತರಣೆ

ಪಿಟಿಐ
Published 14 ಜುಲೈ 2025, 15:58 IST
Last Updated 14 ಜುಲೈ 2025, 15:58 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಭಾರತೀಯ ವಿದ್ಯಾರ್ಥಿ ಇಸ್ಲಾಮಿಕ್‌ ಚಳವಳಿ (ಎಸ್‌ಐಎಂಐ) ಸಂಘಟನೆ ಮೇಲಿನ ರದ್ದತಿಯನ್ನು ಐದು ವರ್ಷ ವಿಸ್ತರಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿತು.

ನ್ಯಾಯಮೂರ್ತಿಗಳಾದ ವಿಕ್ರಂ ನಾಥ್‌ ಹಾಗೂ ಸಂದೀಪ್‌ ಮೆಹ್ತಾ ಅವರು ಈ ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿದರು. ಎಸ್‌ಐಎಂಐ ರದ್ದತಿಯನ್ನು ವಿಸ್ತರಿಸಿ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ನ್ಯಾಯಮಂಡಳಿಯು 2024ರ ಜುಲೈ 24ರಂದು  ಆದೇಶ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT