ADVERTISEMENT

ಏಕಕಾಲಕ್ಕೆ ಚುನಾವಣೆ: ಎಜಿ, ನಿವೃತ್ತ ಸಿಜೆಯಿಂದ ಇಂದು ಅಭಿಪ್ರಾಯ ಸಲ್ಲಿಕೆ

ಲೋಕಸಭೆ, ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ

ಪಿಟಿಐ
Published 25 ಮಾರ್ಚ್ 2025, 0:10 IST
Last Updated 25 ಮಾರ್ಚ್ 2025, 0:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಏಕಕಾಲದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಸಂಸದೀಯ ಸಮಿತಿಯ ಮುಂದೆ ಅಟಾರ್ನಿ ಜನರಲ್‌ ಆರ್‌.ವೆಂಕಟ್‌ರಮಣಿ, ಟೆಲಿಕಾಂ ವಿವಾದಗಳ ಇತ್ಯರ್ಥ ಹಾಗೂ ಮೇಲ್ಮನವಿ ಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಡಿ.ಎನ್‌.ಪಟೇಲ್‌ ಅವರು ಮಂಗಳವಾರ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಈಗ ನಡೆಯುತ್ತಿರುವ ಬಜೆಟ್‌ ಅಧಿವೇಶನದ ಕೊನೆಯ ವಾರದ ಮೊದಲ ದಿನವೇ ಸಮಿತಿಯು ವರದಿ ಸಲ್ಲಿಸಬೇಕಿದೆ. ಕೆಲಸ ಮುಗಿಸಲು ಇನ್ನಷ್ಟು ಕಾಲಾವಕಾಶ ಬೇಕಿದೆ ಎಂದು ಸಮಿತಿಯ ಅಧ್ಯಕ್ಷ, ಬಿಜೆಪಿ ಸಂಸದ ಪಿ.ಪಿ.ಚೌಧರಿ ತಿಳಿಸಿದ್ದಾರೆ. ಹೀಗಾಗಿ, ಸಮಿತಿಯ ಅವಧಿಯನ್ನು ಲೋಕಸಭೆಯು ವಿಸ್ತರಿಸುವ ಸಾಧ್ಯತೆಯಿದೆ.

ಸಮಿತಿಯು ಈಗಾಗಲೇ ತಜ್ಞರ ಅಭಿಪ್ರಾಯ ಸಂಗ್ರಹಿಸುತ್ತಿದೆ. ಸಿಜೆಐ ಯು.ಯು.ಲಲಿತ್‌, ಹಿರಿಯ ವಕೀಲ ಹರೀಶ್‌ ಸಾಳ್ವೆ, ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಪಿ.ಶಾ ಅವರು ಕೂಡ ಸಮಿತಿ ಮುಂದೆ ಹಾಜರಾಗಿ ಅಭಿಪ್ರಾಯ ಸಲ್ಲಿಸಲಿದ್ದಾರೆ. 

ADVERTISEMENT

ಸಮಿತಿಯು 38 ಸದಸ್ಯರನ್ನು ಒಳಗೊಂಡಿದ್ದು, ಇಬ್ಬರು ವಿಶೇಷ ಆಹ್ವಾನಿತರನ್ನು ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.