ADVERTISEMENT

ಹಿಮಾಚಲ ಪ್ರದೇಶದಲ್ಲಿ ರಷ್ಯಾ ಮಹಿಳೆ ಮೇಲೆ ಸಿಂಗಪುರದ ಪ್ರವಾಸಿಗನ ಅತ್ಯಾಚಾರ

ಪಿಟಿಐ
Published 29 ಆಗಸ್ಟ್ 2022, 8:41 IST
Last Updated 29 ಆಗಸ್ಟ್ 2022, 8:41 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಕುಲ್ಲು: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸಿಂಗಪುರದ ವ್ಯಕ್ತಿಯೊಬ್ಬ ರಷ್ಯಾದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಆರೋಪಿ ಅಲೆಕ್ಸಾಂಡರ್ ಲೀ ಜಿಯಾ ಜುನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ) ಅಡಿಯಲ್ಲಿ ಭಾನುವಾರ ಮನಾಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ADVERTISEMENT

ಜುನ್ ತನ್ನ ಕೋಣೆಗೆ ಕರೆದು ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ರಷ್ಯಾ ಮಹಿಳೆಯು ತನ್ನ ತಾಯಿಯೊಂದಿಗೆ ಮನಾಲಿಯಲ್ಲಿ ನೆಲೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.