ADVERTISEMENT

India Covid Update | ಒಂದೇ ದಿನ ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಮಾರ್ಚ್ 2023, 6:13 IST
Last Updated 19 ಮಾರ್ಚ್ 2023, 6:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ ದೃಢಪಟ್ಟ 1,071 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೆ (4,46,95,420) ಏರಿಕೆಯಾಗಿದೆ. ಆ ಪೈಕಿ 5,30,802 ಮಂದಿ ಸಾವಿಗೀಡಾಗಿದ್ದಾರೆ.

ಕೋವಿಡ್‌ನಿಂದಾಗಿ ಶನಿವಾರ ರಾಜ್ಯಸ್ಥಾನ, ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,915ಕ್ಕೆ ತಲುಪಿದೆ.

ADVERTISEMENT

ಪಾಸಿಟಿವಿಟಿ ದರ ಶೇ 0.01ರಷ್ಟಿದರೆ, ಚೇತರಿಕೆ ಪ್ರಮಾಣ ಶೇ 98.8 ರಷ್ಟಿದೆ. ಉಳಿದಂತೆ ಸಾವಿನ ಪ್ರಮಾಣ ಶೇ 1.19 ರಷ್ಟಿದೆ. ದೇಶದಾದ್ಯಂತ ಇದುವರೆಗೆ 220.65 ಕೋಟಿ ಕೋವಿಡ್‌ ಡೋಸ್ ಲಸಿಕೆ ವಿತರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.