ADVERTISEMENT

SIR | ಎಸ್‌ಐಆರ್ ಜಾರಿ ಪ್ರಜಾಪ್ರಭುತ್ವಕ್ಕೆ ಅಪಾಯ: ಕೇರಳ ಸಿಎಂ ಪಿಣರಾಯಿ ವಿಜಯನ್

ಪಿಟಿಐ
Published 28 ಅಕ್ಟೋಬರ್ 2025, 7:36 IST
Last Updated 28 ಅಕ್ಟೋಬರ್ 2025, 7:36 IST
<div class="paragraphs"><p>ಪಿಣರಾಯಿ ವಿಜಯನ್</p></div>

ಪಿಣರಾಯಿ ವಿಜಯನ್

   

(ಪಿಟಿಐ ಚಿತ್ರ)

ತಿರುವನಂತಪುರ: ಬಿಹಾರದ ಬಳಿಕ ಕೇರಳ ಸೇರಿದಂತೆ ದೇಶದ ಇತರೆ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕೈಗೊಳ್ಳುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರಕ್ಕೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ADVERTISEMENT

'ಚುನಾವಣಾ ಆಯೋಗದ ಎಸ್‌ಐಆರ್ ಜಾರಿ ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟು ಮಾಡಲಿದೆ' ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

'ಈ ಕ್ರಮವು ಚುನಾವಣಾ ಆಯೋಗದ ಉದ್ದೇಶದ ಕುರಿತು ಅನುಮಾನಕ್ಕೆ ಕಾರಣವಾಗಿದೆ. ಚುನಾವಣಾ ವ್ಯವಸ್ಥೆಯಲ್ಲಿ ಸಾರ್ವಜನಿಕರ ನಂಬಿಕೆಗೆ ಧಕ್ಕೆ ಉಂಟಾಗಲಿದೆ' ಎಂದು ಅವರು ಹೇಳಿದ್ದಾರೆ.

'2002ರಿಂದ 2004ರವರೆಗೆ ಮತದಾರರ ಪಟ್ಟಿಗಳ ಆಧಾರವಾಗಿಟ್ಟುಕೊಂಡು ಪರಿಷ್ಕರಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿದೆ. ಇದು 1950ರ ಜನಪ್ರತಿನಿಧಿಗಳ ಕಾಯ್ದೆ ಹಾಗೂ 1960ರ ಮತದಾರರ ನೋಂದಣಿ ನಿಯಮಗಳ ಉಲ್ಲಂಘನೆಯಾಗಲಿದೆ' ಎಂದು ಅವರು ಪ್ರತಿಪಾದಿಸಿದ್ದಾರೆ.

'ಕೇರಳದಲ್ಲಿ ಸ್ಥಳೀಯಾಡಳಿತ ಚುನಾವಣೆ ಸಮೀಪಿಸುತ್ತಿರುವಂತೆಯೇ ಮತದಾರರ ಪಟ್ಟಿ ಪರಿಷ್ಕರಣೆ ಪ್ರಾಯೋಗಿಕವಲ್ಲ ಎಂದು ಈಗಾಗಲೇ ಆಯೋಗಕ್ಕೆ ರಾಜ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ' ಎಂದು ವಿಜಯನ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.