
ಅಹಮದಾಬಾದ್: ಗುಜರಾತ್‌ನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಯುತ್ತಿದ್ದು, ಮತದಾರರ ಪಟ್ಟಿಯಲ್ಲಿ 17 ಲಕ್ಷಕ್ಕೂ ಹೆಚ್ಚು ಮೃತರ ಹೆಸರು ಇರುವುದು ಪತ್ತೆಯಾಗಿದೆ.
‘6.14 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ವಿಳಾಸಗಳಲ್ಲಿ ಇರಲಿಲ್ಲ. 30 ಲಕ್ಷಕ್ಕೂ ಹೆಚ್ಚು ಮಂದಿ ಶಾಶ್ವತವಾಗಿ ವಲಸೆ ಹೋಗಿದ್ದಾರೆ. 3.25 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳು ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿರುವುದು ಪತ್ತೆಯಾಗಿದೆ’ ಎಂದು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿಯ ಪ್ರಕಟಣೆ ತಿಳಿಸಿದೆ.
‘ಕಳೆದ ಒಂದು ತಿಂಗಳಲ್ಲಿ, 2025ರ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿದ ಐದು ಕೋಟಿಗೂ ಹೆಚ್ಟು ಮತದಾರರಿಗೆ ಅರ್ಜಿ ನಮೂನೆಗಳನ್ನು ವಿತರಿಸಲಾಗಿದೆ. ಸಲ್ಲಿಕೆಯಾದ ನಮೂನೆಗಳ ಡಿಜಿಟಲೀಕರಣ ಕಾರ್ಯ ನಡೆಯುತ್ತಿದ್ದು, 182 ವಿಧಾನಸಭಾ ಕ್ಷೇತ್ರಗಳ ಪೈಕಿ 12ರಲ್ಲಿ ಪೂರ್ಣಗೊಂಡಿದೆ’ ಎಂದು ಹೇಳಿದೆ.
ಎಸ್‌ಐಆರ್ ಪ್ರಕ್ರಿಯೆ ನ.4ರಿಂದ ಪ್ರಾರಂಭವಾಗಿದ್ದು, ಡಿ.11ರವರೆಗೆ ಮುಂದುವರಿಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.