ADVERTISEMENT

ಎಸ್‌ಐಆರ್: ತಮಿಳುನಾಡಿನಲ್ಲಿ ಆಕ್ಷೇಪಣೆ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2026, 16:08 IST
Last Updated 19 ಜನವರಿ 2026, 16:08 IST
   

ಚೆನ್ನೈ: ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿದ ಕೇಂದ್ರ ಚುನಾವಣಾ ಆಯೋಗ, ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯನ್ನು ಜನವರಿ 30ರವರೆಗೂ ವಿಸ್ತರಿಸಿದೆ.

ಅಂತಿಮ ಮತದಾರರ ಪಟ್ಟಿಯನ್ನು ಫೆ.17ರಂದೇ ಪ್ರಕಟಿಸಲಾಗುವುದು. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ತಮಿಳುನಾಡಿನ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

2026ರ ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.