
ಕೋಲ್ಕತ್ತ : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವೇಳೆ ಜನರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ರಸ್ತೆಗಳನ್ನು ತಡೆದು, ಟೈಯರ್‌ಗಳನ್ನು ಸುಟ್ಟು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
‘ಎಸ್‌ಐಆರ್ ಭಾಗವಾಗಿ ವಿಚಾರಣೆಗೆ ಹಾಜರಾಗುವಂತೆ ಹಲವು ಮುಸ್ಲಿಂ ಸಮುದಾಯದವರಿಗೆ ಸೂಚಿಸಲಾಗಿದೆ. ಇದರಿಂದ ವಯೋವೃದ್ಧರು ಮತ್ತು ಅನಾರೋಗ್ಯ ಪೀಡಿತರಿಗೆ ತೊಂದರೆ ಉಂಟಾಗುತ್ತಿದೆ’ ಎಂದು ಪ್ರತಿಭಟನಕಾರರು ದೂರಿದರು..
ದಕ್ಷಿಣ 24 ಪರಗಣ, ಉತ್ತರ24 ಪರಗಣ, ಜಾಡಗ್ರಾಮ್ ಮತ್ತು ಪುರ್ಬಾ ಮೇದಿನಿಪುರಗಳಲ್ಲಿ ಪ್ರತಿಭಟನೆ ನಡೆಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯು ಪಾರದರ್ಶಕವಾಗಿರಬೇಕು ಮತ್ತು ಜನರಿಗೆ ಅನನುಕೂಲ ಉಂಟುಮಾಡಬಾರದು ಎಂದು ಸುಪ್ರೀಂ ಕೋರ್ಟ್ ತಿಳಿಸಿದ ಬೆನ್ನಲ್ಲೇ ಪ್ರತಿಭಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.