
ನವದೆಹಲಿ: ತಮಿಳುನಾಡಿನಲ್ಲಿ ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿ ಡಿಎಂಕೆ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ನವೆಂಬರ್ 11ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಜೂನ್ 24ರಂದು ಎಸ್‌ಐಆರ್ ಆರಂಭಗೊಂಡಿತ್ತು. 12 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇದನ್ನು ವಿಸ್ತರಿಸಲು ಚುನಾವಣಾ ಆಯೋಗ ನಿರ್ಧರಿಸಿದೆ.
ತಮಿಳುನಾಡಿನಲ್ಲಿ ನವೆಂಬರ್ 4ರಂದು ಎಸ್‌ಐಆರ್ ಅನ್ನು ಆರಂಭಿಸುವಂತೆ ಆಯೋಗ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಡಿಎಂಕೆ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಮುಖ್ಯನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಪೀಠವು ಅರ್ಜಿಯ ವಿಚಾರಣೆಗೆ ದಿನ ನಿಗದಿಪಡಿಸಿದೆ.
ಎಸ್‌ಐಆರ್ ಸಂವಿಧಾನಬಾಹಿರವಾಗಿದ್ದು, ಸಾಮಾನ್ಯವಾಗಿ ಬಳಕೆಯಾಗುವ ಪಡಿತರ ಚೀಟಿ, ಪಾನ್, ಮತದಾರರ ಚೀಟಿಯನ್ನು ಪರಗಣಿಸದೆ ಇರುವ ಮೂಲಕ ಬಹುಪಾಲು ಜನರನ್ನು ಮತದಾನದಿಂದ ಹೊರಗಿಡುವ ಕೆಲಸವನ್ನು ಆಯೋಗ ಮಾಡುತ್ತಿದೆ ಎಂದು ಡಿಎಂಕೆ ಆರೋಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.