ಸಾಂದರ್ಭಿಕ ಚಿತ್ರ
ಲಖನೌ: ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇಂದು ಪೂರ್ಣಗೊಂಡಿದೆ. ಮತದಾರರ ಪಟ್ಟಿಯಿಂದ 2.89 ಕೋಟಿ ನಾಗರಿಕರ ಹೆಸರುಗಳನ್ನು ಕೈಬಿಡಲಾಗಿದೆ.
ರಾಜ್ಯದಲ್ಲಿ ಸದ್ಯ 12.55 ಕೋಟಿ ಮತದಾರಿದ್ದಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿ (CEO) ನವದೀಪ್ ರಿನ್ವಾ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, 'ಮತದಾರರ ಪಟ್ಟಿ ಪರಿಷ್ಕರಣೆ ವೇಳೆ 15.44 ಕೋಟಿ ಮತದಾರರ ಪೈಕಿ ಮೃತಪಟ್ಟವರು, ಶಾಶ್ವತವಾಗಿ ವಲಸೆ ಹೋಗಿರುವವರು ಹಾಗೂ ಬೇರೆ ಬೇರೆ ಕಡೆ ಮತದಾರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ 2.89 ಕೋಟಿ ಹೆಸರುಗಳನ್ನು ಕೈಬಿಡಲಾಗಿದೆ. ಇನ್ನು 12.55 ಕೋಟಿ ಮತದಾರನ್ನು ಉಳಿಸಿಕೊಳ್ಳಲಾಗಿದೆ' ಎಂದು ಹೇಳಿದ್ದಾರೆ.
ಚುನಾವಣಾ ಆಯೋಗದ ಅಧಿಕಾರಿಗಳು ಮತದಾರರ ವಿವರಗಳನ್ನು ಸಂಗ್ರಹಿಸಲು ಕೆಲವು ತಿಂಗಳ ಅಭಿಯಾನ ಕೈಗೊಂಡಿದ್ದರು.
ಆ ವೇಳೆ 12.55 ಕೋಟಿ ಮತದಾರರು ಎಸ್‌ಐಆರ್ ನಮೂನೆಗಳನ್ನು ಭರ್ತಿ ಮಾಡಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.