ನವದೆಹಲಿ:ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ 370ನೇ ವಿಧಿ ರದ್ದತಿ ಬಳಿಕ ಸಿಪಿಐ (ಎಂ) ಪಕ್ಷದ ನಾಯಕ ಸೀತಾರಾಂ ಯೆಚೂರಿ ಅವರ ಕಾಶ್ಮೀರ ಭೇಟಿಗೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ.
ತಮ್ಮ ಪಕ್ಷದ ಸಹದ್ಯೋಗಿ ಹಾಗೂ ಮಾಜಿ ಶಾಸಕ ಮೊಹಮ್ಮದ್ ಯೂಸಪ್ ತಾರಿಗಾಮಿಅನಾರೋಗ್ಯದಿಂದ ಬಳಲುತ್ತಿದ್ದು ಅವರಭೇಟಿಗಾಗಿತಮಗೆ ಕಾಶ್ಮೀರಕ್ಕೆ ತೆರಳಲು ಅವಕಾಶ ನೀಡಬೇಕು ಎಂದುಸೀತಾರಾಂ ಯೆಚೂರಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅವರ ಮನವಿಯನ್ನು ಪುರಸ್ಕರಿಸಿರುವ ನ್ಯಾಯಪೀಠ ಕಾಶ್ಮೀರಕ್ಕೆ ತೆರಳಲು ಅವಕಾಶ ನೀಡಿದೆ.
ಈ ಭೇಟಿಯನ್ನು ಯಾವುದೇ ರಾಜಕೀಯ ಉದ್ದೇಶಕ್ಕೆ ಬಳಸದಿರುವಂತೆ ಸೀತಾರಾಂ ಯೆಚೂರಿ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ನೀವು ಅಲ್ಲಿ ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆಸಿದರೆ ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಲು ಮುಕ್ತರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸೀತಾರಾಂ ಯೆಚೂರಿ ಈ ಹಿಂದೆ ಎರಡು ಬಾರಿ ಕಾಶ್ಮೀರಕ್ಕೆ ತೆರಳಲು ಪ್ರಯತ್ನಿಸಿದ್ದರು. ಆದರೆ ಅಲ್ಲಿಗೆ ಹೋಗಲು ಸಾಧ್ಯವಾಗಿರಲಿಲ್ಲ.
ಕಾಶ್ಮೀರದ ವಿದ್ಯಾರ್ಥಿ ಅಲೀಂ ಸಹೀದ್ ಅವರಿಗೂ ತಮ್ಮ ಪೋಷಕರನ್ನು ಭೇಟಿ ಮಾಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.