ADVERTISEMENT

27 ಮಂದಿ ರಾಜ್ಯಸಭಾ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಪಿಟಿಐ
Published 8 ಜುಲೈ 2022, 11:34 IST
Last Updated 8 ಜುಲೈ 2022, 11:34 IST
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು –ಪಿಟಿಐ ಚಿತ್ರ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು –ಪಿಟಿಐ ಚಿತ್ರ   

ನವದೆಹಲಿ: ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಪೀಯೂಷ್‌ ಗೋಯಲ್ ಸೇರಿದಂತೆ 27 ಮಂದಿ ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಸಭೆಯಲ್ಲಿ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.

10 ರಾಜ್ಯಗಳ 27 ಮಂದಿ ಸದಸ್ಯರು ಒಂಬತ್ತು ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 12 ಮಂದಿ ಹಿಂದಿಯಲ್ಲಿ, ನಾಲ್ವರು ಇಂಗ್ಲಿಷ್‌ನಲ್ಲಿ, ತಲಾ ಇಬ್ಬರು ಸಂಸ್ಕೃತ, ಕನ್ನಡ, ಮರಾಠಿ ಮತ್ತು ಒಡಿಯಾ ಭಾಷೆಗಳಲ್ಲೂ ,ತಲಾ ಒಬ್ಬರು ಪಂಜಾಬಿ, ತಮಿಳು ಮತ್ತು ತೆಲುಗಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.