ADVERTISEMENT

ಕದನ ವಿರಾಮ | ಜಮ್ಮು & ಕಾಶ್ಮೀರದಲ್ಲಿ ಪರಿಸ್ಥಿತಿ ಸಹಜ; ನಿಟ್ಟುಸಿರು ಬಿಟ್ಟ ಜನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಮೇ 2025, 2:11 IST
Last Updated 11 ಮೇ 2025, 2:11 IST
   

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಶನಿವಾರ ಸಂಜೆಯಿಂದಲೇ ಕದನ ವಿರಾಮ ಜಾರಿಗೆ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದಾದ್ಯಂತ ರಾತ್ರಿಯಿಡಿ ಯಾವುದೇ ಡ್ರೋನ್‌, ಗುಂಡಿನ ದಾಳಿ ಅಥವಾ ಶೆಲ್‌ ದಾಳಿ ನಡೆದ ವರದಿಯಾಗಿಲ್ಲ ಎಂದು ಸುದ್ದಿಸಂಸ್ಥೆ ಎಎನ್‌ಐ ತಿಳಿಸಿದೆ.

ಜಮ್ಮು ನಗರ, ರಜೌರಿ, ಅಖ್ನೂರ್, ಪೂಂಚ್‌, ಪಠಾಣ್‌ಕೋಟ್‌ ಮತ್ತು ಫಿರೋಜ್‌ಪುರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ದೈನಂದಿನ ಕೆಲಸದಲ್ಲಿ ಜನರು ತೊಡಗಿಕೊಂಡಿದ್ದಾರೆ.

ಅದಾಗ್ಯೂ, ಪಾಕಿಸ್ತಾನದ ಗಡಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬ್ಲ್ಯಾಕ್‌ಜೌಟ್‌ ಮುಂದುವರಿದಿದ್ದು, ಮನೆಯೊಳಗೆ ಇರುವಂತೆ ಜನರಿಗೆ ತಿಳಿಸಲಾಗಿದೆ.

ADVERTISEMENT

‘ಆಪರೇಷನ್‌ ಸಿಂಧೂರ’ ಸೇನಾ ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ ಉಲ್ಬಣಗೊಂಡಿತ್ತು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಈ ಸೇನಾ ಕಾರ್ಯಚರಣೆಯನ್ನು ಆರಂಭಿಸಿತ್ತು.

ಅಮೆರಿಕದ ಮಧ್ಯಸ್ಥಿತಿಕೆ ನಂತರ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಶಮನಗೊಂಡಿದ್ದು, ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಅದಾಗ್ಯೂ ಶನಿವಾರ ರಾತ್ರಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿ ಜಮ್ಮು ಮತ್ತು ಕಾಶ್ಮೀರದ ಕೆಲ ಕಡೆ ದಾಳಿ ನಡೆಸಿದೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.