ಅಪಘಾತ –ಪ್ರಾತಿನಿಧಿಕ ಚಿತ್ರ
ಹಾಪುರ (ಉತ್ತರ ಪ್ರದೇಶ): ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು 6 ಜನ ಮೃತಪಟ್ಟಿದ್ದಾರೆ. ಬ್ರಜ್‌ಘಾಟ್ ಟೋಲ್ ಪ್ಲಾಜಾ ಬಳಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಒಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಮೀರತ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
‘ಮಧ್ಯರಾತ್ರಿ 12.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ' ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ವರ್ಮಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.