
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ನಾಗ್ಪುರ (ಪಿಟಿಐ): ನಗರದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಂದರ ನೀರಿನ ಟ್ಯಾಂಕ್ ಶುಕ್ರವಾರ ಕುಸಿದು ಬಿದ್ದಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
ಎಂಐಡಿಸಿ ಬುಟಿಬೋರಿ ಪ್ರದೇಶದಲ್ಲಿರುವ ಸೌರಫಲಕ ತಯಾರಿಕಾ ಕಾರ್ಖಾನೆ ಅವಾಡಾ ಎಲೆಕ್ಟ್ರೋ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಳಿಗ್ಗೆ 9.30ರ ವೇಳೆಯಲ್ಲಿ ಈ ಅವಘಡ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟ್ಯಾಂಕ್‌ನ ಅವಶೇಷದಡಿ ಸಿಲುಕಿ ಮೂವರು ಮೃತಪಟ್ಟಿದ್ದು, ಗಾಯಗೊಂಡಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.