ಹೈದರಾಬಾದ್: ತೆಲಂಗಾಣದನಲ್ಗೊಂಡ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ವೆಲಿಮಿನೆಡು ಗ್ರಾಮದಲ್ಲಿ ಚಿಟ್ಯಾಲ ಬ್ಲಾಕ್‌ನ ಹಿಂಡೀಸ್ ಲ್ಯಾಬ್‌ನಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಅಯೋಧ್ಯೆ ದೀಪೋತ್ಸವ: ಭರದಿಂದ ಸಾಗಿದ ದೀಪ ತಯಾರಿಕೆ ಕಾರ್ಯ
ಸ್ಫೋಟದಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿತು.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸಿತು.
ಘಟನೆ ಹಿಂದಿನ ಕಾರಣ ತಿಳಿದು ಬಂದಿಲ್ಲ. ಸಮೀಪದ ನಿವಾಸಿಗಳು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.