ತೆಂಕಾಶಿ: ತಮಿಳುನಾಡಿನ ತೆಂಕಾಶಿ ಜಿಲ್ಲೆಯ ಪುಲ್ಲಿಯಂಗುಡಿಯಲ್ಲಿ ಇಂದು (ಭಾನುವಾರ) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ಮೂಲಗಳ ಪ್ರಕಾರ ಜಿಲ್ಲೆಯ ಕುಟ್ರಾಲಂನಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಐವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಪುಲ್ಲಿಯಂಗುಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ತೆಂಕಾಶಿಯ ಉನ್ನತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.